Don't Miss
Rahul Gandhi never said INDIA alliance will remove 50% reservations; Fact Check

ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim:  I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು.

ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು.

ರೇಟಿಂಗ್: ಸಂಪೂರ್ಣವಾಗಿ ಸುಳ್ಳು-- Five rating

ಸತ್ಯ ಪರಿಶೀಲನೆ ವಿವರಗಳು

ಭಾರತದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ಸ್ಥಾನದಲ್ಲಿ ಇರುವುದನ್ನು ಗಮನದಲ್ಲಿರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ತಪ್ಪುದಾರಿಗೆಳೆಯುವ ಹೇಳಿಕೆಗಳು ಕಾಣಿಸಿಕೊಳ್ಳುತ್ತಿವೆ. ಅಂತಹ ಒಂದು ಪೋಸ್ಟರ್‌ನಲ್ಲಿ, ತಾವು ಅಧಿಕಾರಕ್ಕೆ ಬಂದರೆ I.N.D.I.A. ಮೈತ್ರಿಕೂಟವು ಮೀಸಲಾತಿಯನ್ನು 50% ರಷ್ಟು ಕಡಿಮೆ ಮಾಡುತ್ತದೆಯೆನ್ನುವ ರಾಹುಲ್ ಗಾಂಧಿಯವರ ಹೇಳಿಕೆಯಿತ್ತು.

‘I.N.D.I. ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ದಷ್ಟು ಮೀಸಲಾತಿಯನ್ನು ತೆಗೆದು ಹಾಕುತ್ತಾರೆ’ ಎಂದು ಅದರಲ್ಲಿ ಬರೆಯಲಾಗಿತ್ತು. ಇದನ್ನು ಇಲ್ಲಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾಗಿದೆ:

FACT CHECK

ಡಿಜಿಟೈ ಇಂಡಿಯಾ ತಂಡವು ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ, ಗೂಗಲ್ ನ್ಯೂಸ್ ನಲ್ಲಿ ಸರಳವಾದ ಹುಡುಕಾಟ ನಡೆಸಿದಾಗ ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಸರ್ಕಾರಿ ನೇಮಕಾತಿಗಳಲ್ಲಿ 50% current cap ಅನ್ನು ತೆಗೆದುಹಾಕುವುದಾಗಿ ಈ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂತು. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಹೆಚ್ಚಿಸಲಾಗುವುದು ಎಂಬುದು ಅವರ ಅರ್ಥವಾಗಿತ್ತು.

 ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಭಾಗವಾಗಿ   ಜಾರ್ಖಂಡ್‌ನಲ್ಲಿ ರ‍್ಯಾಲಿಯನ್ನುದ್ದೇಶಿಸುತ್ತಾ ರಾಹುಲ್ ಗಾಂಧಿಯವರು ಮೀಸಲಾತಿಯ ಕುರಿತು ಮಾಡಿದ ಭಾಷಣ ಇಲ್ಲಿದೆ.

50% ಮೀಸಲಾತಿ ಮಿತಿಯನ್ನು ತೆಗೆದುಹಾಕುವ ಬಗ್ಗೆ ರಾಹುಲ್ ಗಾಂಧಿಯವರು ಹೇಳುವುದನ್ನು ಸ್ಪಷ್ಟವಾಗಿ ಇಲ್ಲಿ ಕೇಳಬಹುದು. “ಪ್ರಸ್ತುತ ನಿಯಮಗಳಡಿಯಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮೀಸಲಾತಿಯನ್ನು ನೀಡಲಾಗುವುದಿಲ್ಲ. ಕಾಂಗ್ರೆಸ್ ಸರ್ಕಾರ ಅಥವಾ I.N.D.I.A ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಮಿತಿಯನ್ನು ತೆಗೆದುಹಾಕಲಾಗುವುದು.

ಇಲ್ಲಿಯೂ ಕಾಣುವಂತೆ ಅವರು ತಮ್ಮ ಯಾತ್ರೆಯ ಸಮಯದಲ್ಲಿ ಹಲವಾರು ಸ್ಥಳಗಳಲ್ಲಿ ಇದೇ ವಿಷಯವನ್ನು ಪುನರುಚ್ಚರಿಸಿದ್ದಾರೆ. ಹಾಗಾಗಿ, I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50%ದಷ್ಟು ಕಡಿಮೆ ಮಾಡುತ್ತದೆ ಎಂದು ರಾಹುಲ್ ಗಾಂಧಿಯವರು ಘೋಷಿಸಿಲ್ಲ.

ಇದನ್ನೂ

ಇದನ್ನೂ ಓದಿ:

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ತೋರಿಸುವುದಾಗಿ ಹೇಳುವ ವೈರಲ್ ವೀಡಿಯೊ; ಸತ್ಯ ಪರಿಶೀಲನೆ